ಧಾರವಾಡ ಜಿ.ಪಂ ಸದಸ್ಯರಾಗಿದ್ದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಸತತ ಕಾನೂನು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ವಿಯನ್ ಕುಲಕರ್ಣಿಗೆ ಷರತ್ತುಬದ್ದ ಜಾಮೀನು ನೀಡಿದೆ.
5 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ ಪಡೆದು ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದೇ ವೇಳೆ ಧಾರವಾಡಕ್ಕೆ ಪ್ರವೇಶಕ್ಕೆ ನಿರ್ಭಂಧ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ತಮಗೆ ವಿಧಿಸಿರೋ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ಮತ್ತು ಜಾಮೀನು ನೀಡುವಂತೆ ಹೈಕೋರ್ಟ್ ಬಳಿ ಮನವಿ ಮಾಡಿದ್ರು. ವಾದ-ವಿವಾದ ಆಲಿಸಿದ್ದ ನ್ಯಾಯಪೀಠ ಇಂದು ಮಹತ್ವದ ತೀರ್ಪು ನೀಡಿದ್ದು, ವಿನಯ್ ಕುಲಕರ್ಣಿ ಸೇರಿದಂತೆ ನಾಲ್ವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ.
ಸೆಷನ್ ಕೋರ್ಟ್ ವಿನಯ್ ಕುಲಕರ್ಣಿಗೆ ಶಿಕ್ಷೆ ವಿಧಿಸಿತ್ತು. ಜೀವಾವಧಿ ಶಿಕ್ಷಎ ವಿಧಿಸಿದ್ದ ಕಾರಣ ವಿನಯ್ ಕುಲಕರ್ಣಿ 106 ದಿನಗಳಿಂದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಇಂದು ಹೈಕೋರ್ಟ್ ಸೆಷನ್ ಕೋರ್ಟ್ ಶಿಕ್ಷೆ ಎತ್ತಿಹಿಡಿದರೆ ವಿಯನ್ ಕುಲಕರ್ಣಿ ಶಾಸಕ ಸ್ಥಾನವೂ ರದ್ದಾಗುವು ಭೀತಿಯಲ್ಲಿತ್ತು. ಆದರೆ ಹೈಕೋರ್ಟ್ ಜಾಮೀನು ನೀಡಿದ ಕಾರಣ ಇದೀಗ ವಿನಯ್ ಕುಲಕರ್ಣಿ ಮತ್ತೆ ರಾಜಕೀಯವಾಗಿ ಸಕ್ರೀಯವಾಗಲಿದ್ದಾರೆ.


