Homeಕರ್ನಾಟಕಯುವ ನಿಧಿ ಯೋಜನೆಗೆ ಶುಕ್ರವಾರ ಚಾಲನೆ; ಶಿವಮೊಗ್ಗದಲ್ಲಿ ಸಮಾರಂಭದ ವೇದಿಕೆ ಸಜ್ಜು

ಯುವ ನಿಧಿ ಯೋಜನೆಗೆ ಶುಕ್ರವಾರ ಚಾಲನೆ; ಶಿವಮೊಗ್ಗದಲ್ಲಿ ಸಮಾರಂಭದ ವೇದಿಕೆ ಸಜ್ಜು

ಸ್ವಾಮಿ ವಿವೇಕಾನಂದ ಜನ್ಮ ದಿನವಾದ ನಾಳೆ (ಜ.12) ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ಷಕಾಂಕ್ಷೆಯ ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.

ಶಿವಮೊಗ್ಗ ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಫಲಾನುಭವಿಗಳಿಗೆ ನಗದು ವರ್ಗಾವಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರು ಯೋಜನೆಗೆ ಚಾಲನೆ ನೀಡಲಿದ್ದಾರೆ.

ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕ್‌ನಲ್ಲಿ ವಿಶಾಲವಾದ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. 85 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗಾ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಅಧಿಕ ಫಲಾನುಭವಿಗಳು ಹಾಗೂ ಅಷ್ಟೇ ಸಂಖ್ಯೆಯ ಜನರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ಸುಮಾರು 1 ಲಕ್ಷಕ್ಕೂ ಅಧಿಕ ಫಲಾನುಭವಿಗಳು ಭಾಗಿಯಾಗಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲೇ ವಾಸ್ತವ್ಯ ಹೂಡಿರುವ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವ ಹಾಗೂ ಕಾರ್ಯಕ್ರಮದ ರೂವಾರಿ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು, ವೇದಿಕೆಯ ಸಿದ್ಧತೆ, ಆಸನ ವ್ಯವಸ್ಥೆ, ವಾಹನ ನಿಲುಗಡೆ, ಊಟೋಪಹಾರ ಹಾಗೂ ಮೂಲಭೂತ ವ್ಯವಸ್ಥೆ ಒದಗಿಸಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳಿನ್ನು ಮಾಡಿಸುತ್ತಿದ್ದಾರೆ.

ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ರಸ್ತೆ ಸಾರಿಗೆ ನಿಗಮ ಮತ್ತ ಖಾಸಗಿ ಒಡೆತನದ ಬಸ್ ಹಾಗೂ ಇತರೆ ವಾಹನಗಳ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರತಿ ಬಸ್​ಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಸುರಕ್ಷತೆಯ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಹೆಸರು ಮತ್ತು ಮೊಬೈಲ್ ನಂಬರ್ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments